ಆರ್.ಆರ್.ಪದಕಿ
ಈ ಲೇಖನದ ವಿಷಯ ವಿಕಿಪೀಡಿಯ ಸಾಮಾನ್ಯ ಗಮನಾರ್ಹತೆ ಮಾರ್ಗದರ್ಶಿ ಹೊಂದಿಲ್ಲ. ವಿಷಯದ ಬಗ್ಗೆ ವಿಶ್ವಾಸಾರ್ಹ, ಮಾಧ್ಯಮಿಕ ಮೂಲಗಳನ್ನು ಸೇರಿಸುವ ಮೂಲಕ ಗಮನವನ್ನು ಸ್ಥಾಪಿಸಲು ದಯವಿಟ್ಟು ಸಹಾಯ ಮಾಡಿ. ಮಹತ್ವವನ್ನು ಸ್ಥಾಪಿಸಲಾಗದಿದ್ದರೆ, ಲೇಖನವನ್ನು ವಿಲೀನಗೊಳಿಸಬಹುದು, ಮರುನಿರ್ದೇಶಿಸಲಾಗುತ್ತದೆ, ಅಥವಾ ಅಳಿಸಬಹುದು. general notability guideline. |
ಡಾ.ಆರ್.ಆರ್.ಪದಕಿ(ಡಾ.ರಂಗರಾವ ರಾಮರಾವ ಪದಕಿ)ಯವರು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಉಚಿತವಾಗಿ ಆರೋಗ್ಯ ಸೇವೆ ನೀಡಿ ಡಾ.ಪದಕಿಯೆಂದೆ ಹೆಸರುವಾಸಿಯಾಗಿದ್ದರು.
ಬಾಲ್ಯ
[ಬದಲಾಯಿಸಿ]ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ 22ನೇ ಅಗಷ್ಟ್ 1925ರಲ್ಲಿ ಜನಿಸಿದರು.
ವಿದ್ಯಾಭಾಸ
[ಬದಲಾಯಿಸಿ]ಪದಕಿಯವರು ತಾಳಿಕೋಟೆ, ಬಾಗಲಕೋಟೆ, ಗದಗ, ಧಾರವಾಡ, ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿಕ್ಷಣ ಪಡೆದು ಪುಣೆಯ ಬಿಜೆ ಮೆಡಿಕಲ್ ಕಾಲೇಜಿನಲ್ಲಿ 1951 ರಲ್ಲಿ ಎಂಬಿಬಿಎಸ್ ಪದವಿ ಮುಗಿಸಿದ್ದರು.
ಸೇವೆ
[ಬದಲಾಯಿಸಿ]1952 ರಲ್ಲಿ ಸರ್ಕಾರಿ ವೈದ್ಯರಾಗಿ ಮಹಾರಾಷ್ಟ್ರದ ಸಾಂಗ್ಲಿ, ಕರ್ನಾಟಕದ ಕುಮಟಾದಲ್ಲಿ ಸೇವೆ ಸಲ್ಲಿಸಿದ ಅವರಿಗೆ ಸರ್ಕಾರಿ ನೌಕರಿ ಬೇಡವೆನಿಸಿ ರಾಜೀನಾಮೆ ನೀಡಿ 1957ರಲ್ಲಿ ಮುದ್ದೇಬಿಹಾಳದಲ್ಲಿ ಸ್ವಂತ ಕ್ಲಿನಿಕ್ ಸ್ಥಾಪಿಸಿದರು.
ನಿಧನ
[ಬದಲಾಯಿಸಿ]3ನೇ ಅಗಷ್ಟ್ 2018ರಂದು 93ನೇ ವಯಸ್ಸಿನಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಪುತ್ರ (ಇಂಗ್ಲೆಂಡಿನಲ್ಲಿ ಸಾರ್ವಜನಿಕ ಆರೋಗ್ಯ ನಿರ್ದೇಶಕ) ಡಾ.ಕಿಶೋರ ಸೇರಿದಂತೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರಿದ್ದಾರೆ.
ಪ್ರಶಸ್ತಿ
[ಬದಲಾಯಿಸಿ]ಅವರ ಸೇವೆಯನ್ನು ಗುರುತಿಸಿ ಅನೇಕ ಸಂಘ, ಸಂಸ್ಥೆಗಳು ಅನೇಕ ಪ್ರಶಸ್ತಿ ನೀಡಿದರೆ, ರಾಜ್ಯ ಸರ್ಕಾರ 2015 ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.[೧]
ಉಲ್ಲೇಖಗಳು
[ಬದಲಾಯಿಸಿ]