ನಾಗಠಾಣ
ನಾಗಠಾಣ
ನಾಗಠಾಣ | |
---|---|
village |
ನಾಗಠಾಣ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕಿನಲ್ಲಿದೆ.
ಭೌಗೋಳಿಕ ವಿವರ
[ಬದಲಾಯಿಸಿ]ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦"x ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ.
ಹವಾಮಾನ
[ಬದಲಾಯಿಸಿ]- ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
- ಬೇಸಿಗೆಕಾಲ - ೩೫°C-೪೨°C ಡಿಗ್ರಿ ಸೆಲ್ಸಿಯಸ್
- ಚಳಿಗಾಲ ಮತ್ತು
- ಮಳೆಗಾಲ - ೧೮°C-೨೮°C ಡಿಗ್ರಿ ಸೆಲ್ಸಿಯಸ್.
- ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಸ್ಟು ಆಗಿರುತ್ತದೆ.
- ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ.
ಜನಸಂಖ್ಯೆ
[ಬದಲಾಯಿಸಿ]ಗ್ರಾಮದಲ್ಲಿ ಜನಸಂಖ್ಯೆ(2011) ಸುಮಾರು 8549 ಇದೆ. ಅದರಲ್ಲಿ 4339 ಪುರುಷರು ಮತ್ತು 4210 ಮಹಿಳೆಯರು ಇದ್ದಾರೆ.
ಭಾಷೆ-ಸಂಸ್ಕೃತಿ
[ಬದಲಾಯಿಸಿ]ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ,, ಸೇಂಗಾ ಚಟ್ನಿ,, ಎಣ್ಣಿ ಬದನೆಯಕಾಯಿ ಪಲ್ಯ,, ಕೆನೆಮೊಸರೂ ಲಭ್ಯ.
ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.
ಧರ್ಮ
[ಬದಲಾಯಿಸಿ]ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ.
ನೀರಾವರಿ
[ಬದಲಾಯಿಸಿ]ಗ್ರಾಮದ ಪ್ರತಿಶತ 50 ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
ಕಾಲುವೆ
[ಬದಲಾಯಿಸಿ]ಕೃಷ್ಣಾ ನದಿಯ ಆಲಮಟ್ಟಿ ಆಣೆಕಟ್ಟುಯಿಂದ ಮುಳವಾಡ ಏತ ನೀರಾವರಿ ಕಾಲುವೆ ಕಾಲುವೆಯಿದ್ದು ಗ್ರಾಮದಲ್ಲಿ ಸಂಪೂರ್ಣ ಕೃಷಿಗೆ ಸಹಕಾರಿಯಾಗಿದೆ.
ಕೃಷಿ ಮತ್ತು ತೋಟಗಾರಿಕೆ
[ಬದಲಾಯಿಸಿ]ಗ್ರಾಮದ ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು ೭೫% ಜನರು ಕೆಲಸ ಮಾಡುತ್ತಾರೆ. ಗ್ರಾಮದಲ್ಲಿ ಕೇವಲ ೧೫% ಭೂಮಿ ಮಾತ್ರ ನೀರಾವರಿ ಹೊಂದಿದೆ. ಉಳಿದ ೮೫% ಭೂಮಿ ಮಳೆಯನ್ನೇ ಅವಲಂಭಿಸಿದೆ.
ಉದ್ಯೋಗ
[ಬದಲಾಯಿಸಿ]ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.
ಬೆಳೆ
[ಬದಲಾಯಿಸಿ]ಆಹಾರ ಬೆಳೆಗಳು
ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ
ವಾಣಿಜ್ಯ ಬೆಳೆಗಳು
ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.
ತರಕಾರಿ ಬೆಳೆಗಳು
ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಚೌಳಿಕಾಯಿ,ಕೊತಂಬರಿ ಇತ್ಯಾದಿ.
ಹಬ್ಬ
[ಬದಲಾಯಿಸಿ]ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಹೋಳಿ ಹಬ್ಬ ಶಿವರಾತ್ರಿ ಬಸವಜಯಂತಿ ವಿಜಯದಶಮಿ ಮೌನೇಶ್ವರ ತೇರು ಉತ್ಸವ ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
ಶಿಕ್ಷಣ
[ಬದಲಾಯಿಸಿ]ನಾಗಠಾಣದಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಜೊತೆ ಪದವಿಪೂರ್ವ ಕಾಲೇಜಿದೆ.
ಸಾಕ್ಷರತೆ
[ಬದಲಾಯಿಸಿ]ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ.[ಸೂಕ್ತ ಉಲ್ಲೇಖನ ಬೇಕು]
ರಾಜಕೀಯ
[ಬದಲಾಯಿಸಿ]ಗ್ರಾಮವು ಬಿಜಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ನಾಗಠಾಣ ವಿಧಾನಸಭಾ ಕ್ಷೇತ್ರವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. ನಾಗಠಾಣ ಮತಕ್ಷೇತ್ರ(2018)ದಲ್ಲಿ 1,07,407 ಪುರುಷರು, 99,773 ಮಹಿಳೆಯರು ಸೇರಿ ಒಟ್ಟು 2,07,180 ಮತದಾರರಿದ್ದಾರೆ.[ಸೂಕ್ತ ಉಲ್ಲೇಖನ ಬೇಕು]
ಉಲ್ಲೇಖಗಳು
[ಬದಲಾಯಿಸಿ]
- Short description with empty Wikidata description
- Articles using infobox templates with no data rows
- Pages using infobox settlement with unknown parameters
- Pages using infobox settlement with missing country
- Pages using infobox settlement with no map
- Pages using infobox settlement with no coordinates
- Articles with unsourced statements from May 2021
- ವಿಜಯಪೂರ ತಾಲ್ಲೂಕಿನ ಹಳ್ಳಿಗಳು
- ವಿಜಯಪುರ ಜಿಲ್ಲೆ
- ಬಿಜಾಪುರ ತಾಲ್ಲೂಕು
- ಉಲ್ಲೇಖವಿಲ್ಲದ ಲೇಖನಗಳು